ಮೈಸೂರು : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮೈಸೂರಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಉತ್ತಮ ಪ್ರಜಾಪ್ರಭುತ್ವಕ್ಕಾಗಿ ಜನರು ಬಂದು, ಮತ ಚಲಾಯಿಸಿ ಮತ್ತು ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನೂ ಮತ ಹಾಕಿದ್ದೇನೆ… ನಾವು ಪ್ರಜಾಪ್ರಭುತ್ವದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ.