ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿ ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರಿಗೆ ಶಾಲು ಹೊದಿಸಿ ಅಭಿನಂದಿಸಿ ಗೌರವಿಸಿದರು. ಬಳಿಕ ಕೆಲಕಾಲ ಸಮಾಲೋಚನೆ ನಡೆಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪರಿಶ್ರಮ ಅಷ್ಟೇ ಇದೆ. ಹೀಗಾಗಿ ಬಸವರಾಜ್ ರಾಯರೆಡ್ಡಿ ಅವರು ಡಿಕೆಶಿ ಅವರಿಗೆ ಅಭಿನಂದಿಸಿ ಗೌರವಿಸಿದರು.