ನವದೆಹಲಿ: ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ನಲ್ಲಿದ್ದ ಎ.ಟಿ ರಾಮಸ್ವಾಮಿ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇಂದು ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Thakur) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಅರಕಲಗೂಡು ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಈ ಬಗ್ಗೆ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ರಾಮಸ್ವಾಮಿ ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶದ ಅತಿದೊಡ್ಡ ಪಕ್ಷವನ್ನು ಸೇರಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿಗೂ ಶಕ್ತಿ ಸಿಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಹೆಚ್ಚು ಕೆಲಸ ಮಾಡಿದೆ ಎಂದು ಹೇಳಿದರು.