ಕೆ.ಆರ್.ಪುರ: ಕೆ.ಆರ್.ಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಮೋಹನ್ ನೇತೃತ್ವದಲ್ಲಿ ಮಾಜಿ ನಗರಸಭಾ ಸದಸ್ಯ ಸ್ವತಂತ್ರ ನಗರದ ಬಾಲಕೃಷ್ಣ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ ಸಮ್ಮುಖದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಅವರ ಜೊತೆಗೆ ಗ್ರಾಮದ 200 ಕ್ಕೂ ಹೆಚ್ಚು ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಬಿಜೆಪಿ ಶಾಕ್ ನೀಡಿದ್ದಾರೆ.
ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ ರಾಜ್ಯದಲ್ಲಿನ 40% ಸರ್ಕಾರವನ್ನು ಕಿತ್ತೆಸೆದು,ಜನಪರ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರವಂತೆ ತಿಳಿಸಿದರು.
ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ ಹೆಸರು ಮಾಡಿದೆ,ಇಂತಹ ಬಿಜೆಪಿ ಸರ್ಕಾರದಿಂದ ಅಭಿವೃದ್ಧಿ ಅಸಾಧ್ಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿದರು. ನಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಮಾತನಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತವರಣವಿದೆ ಈ ಬಾರಿ ಕಾಂಗ್ರೆಸ್ ಕ್ಷೇತ್ರದಲ್ಲಿ ಜಯಭೇರಿ ಭಾರಿಸಲಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯದ ನೇತೃತ್ವದ ಸರ್ಕಾರ ಮಾಡಿರುವ ಜನಪರ ಕಾರ್ಯಗಳು ನಮಗೆ ಶ್ರೀರಕ್ಷೆಯಾಗಲಿದೆ. ಕಳೆದ ಹತ್ತು ವರ್ಷ ಕಾಲ ಯಾವುದೇ ಅಭಿವೃದ್ಧಿ ಕೆಲಸಗಳು ಕ್ಷೇತ್ರದಲ್ಲಿ ಆಗಲಿಲ್ಲ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಮತ್ತು ಶಾಂತಿ ನೆಮ್ಮದಿಗಾಗಿ ಕಾಂಗ್ರೆಸ್ ಪಕ್ಷವನ್ನ ಆಯ್ಕೆ ಮಾಡಿ ಎಂದರು.
ಕೆ.ಆರ್. ಪುರ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅವಶ್ಯಕವಾಗಿದ್ದು,ಮುಂದಿನ ದಿನಗಳಲ್ಲಿ ನನ್ನ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದೆಂದು ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್,ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ, ಮಾಜಿ ನಗರಸಭಾ ಸದಸ್ಯ ಬಾಲಕೃಷ್ಣ ಉಪಸ್ಥಿತರಿದ್ದರು