ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮುರುಘಾಶ್ರೀ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಜಿಲ್ಲೆ

ಚಿತ್ರದುರ್ಗ: ಮಠದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾ ಗಿರುವ ಚಿತ್ರದುರ್ಗದ ಮುರುಘಾಶ್ರೀ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇದರಿಂದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜೈಲೇ ಗತಿಯಾಗಿದೆ. ಮುರುಘಾಶ್ರೀ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದ್ದರಿಂದ ವಿಡಿಯೋ ಕಾನ್ಫರೆನ್ಸ್​ ಮೂಲಕ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು.

ಇದನ್ನು ವಿಚಾರಣೆ ನಡೆಸಿದ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ನವೆಂಬರ್ 25ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದೆ. ಎ1 ಆರೋಪಿ ಮುರುಘಾ ಶ್ರೀ, ಎ2 ವಾರ್ಡನ್ ರಶ್ಮಿ, ಎ3 ಮಠದ ಮ್ಯಾನೇಜರ್ ಪರಮಶಿ ವಯ್ಯಗೆ ನವೆಂಬರ್ 25ರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.