ದೊಡ್ಡಬಳ್ಳಾಪುರ: ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಪುತ್ರರಾದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಜನಪ್ರತಿ ನಿಧಿಗಳ ವಿಶೆಷ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ಹಾಗೂ 20 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.. ಮೆಡಿಕಲ್ ಸೀಟು ಕೊಡಿಸುವುದಾಗಿ ವಂಚಿಸಿದ್ದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತ್.ಜೆ ಅವರು ಆದೇಶ ನೀಡಿದ್ದಾರೆ.
ದೇವರಾಜು ಅರಸು ಮೆಡಿಕಲ್ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಹೇಳಿ ಪ್ರಕಾಶ್ ಕುಮಾರ್ ಯರ್ರಪ್ಪ ಎಂಬುವರಿಂದ 45 ಲಕ್ಷ ಪಡೆದು ವಂಚನ ಮಾಡಿದ್ದಾರೆ ಎನ್ನಲಾಗಿದೆ.. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿ ನರಸಿಂಹಸ್ವಾಮಿ ಪರ ವಕೀಲರು ಜಾಮೀನು ಕೋರಲಾಗಿದ್ದು,ಪರಿಶೀಲನೆ ನಡೆಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.