ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ವಿರೋಧ ಕೂಡ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್, ಮೆಟ್ರೋ, ಪ್ರೈವೇಟ್ ಬಸ್ ಗಳಿಗೂ ಸಹ ತಟ್ಟಿದ್ದು, ಓಲಾ, ಊಬರ್ ಬುಕ್ಕಿಂಗ್ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ .
ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ ಫ್ರೀ ಬಸ್ ಪ್ರಯಾಣದ ಎಫೆಕ್ಟ್ ಓಲಾ, ಊಬರ್ಗೂ ತಟ್ಟಿದೆ.
ಶಕ್ತಿ ಯೋಜನೆ ಜಾರಿಯಾದ ಎರಡು ದಿನಗಳಿಂದ, ಓಲಾ-ಊಬರ್ ಚಾಲಕರಿಗೆ ಬುಕ್ಕಿಂಗ್ನಲ್ಲಿ ವಿಳಂಬವಾಗ್ತಿದೆ. ಗಂಟೆಗೆ ಒಂದೋ ಎರಡೋ ಬುಕ್ಕಿಂಗ್ ಬರುತ್ತಿದೆ. ಹೀಗಾಗಿ ಓಲಾ- ಊಬರ್, ಟ್ಯಾಕ್ಸಿ ಚಾಲಕರು ಆತಂಕದಲ್ಲಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೆ ನಮ್ಮ ಹೊಟ್ಟೆ ಮೇಲೂ ಸರ್ಕಾರ ಹೊಡೆದಂತಾಗುತ್ತೆ. ಕನಿಷ್ಟ ಪಕ್ಷ ಸರ್ಕಾರ ನಮ್ಮ ವಾಹನಗಳ ಮೇಲಿರುವ ಪರ್ಮಿಟ್ ಟ್ಯಾಕ್ಸ್ ಆದ್ರೂ ಕಡಿಮೆ ಮಾಡಲಿ ಅಂತಾ ಒತ್ತಾಯಿಸಿದ್ದಾರೆ