ಬೆಂಗಳೂರು ;– ರಾಜ್ಯದಲ್ಲಿ ಉಚಿತ ವಿದ್ಯುತ್ಗೊಸ್ಕರ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಚಿತ ವಿದ್ಯುತ್ಗೊಸ್ಕರ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ಲೋಡ್ ಶೆಡ್ಡಿಂಗ್ಗೆ ಸರಕಾರ ಆದೇಶವನ್ನೇ ಮಾಡಿಲ್ಲ. ನಿರ್ವಹಣೆ ವೇಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿರಬಹುದು ಅಷ್ಟೆ. ಸ್ಥಳೀಯವಾಗಿ ಸಮಸ್ಯೆಗಳಿದ್ದರೆ ಗಮನಕ್ಕೆ ತರುವಂತೆ ಜೆಸ್ಕಾಂ ಅಧಿಕಾರಿ ಯನ್ನು ತರಾಟೆಗೆ ತೆಗೆದುಕೊಂಡರು.
ಗೃಹಜ್ಯೋತಿ ಒಳ್ಳೆಯ ಕಾರ್ಯ ಕ್ರಮವಾಗಿದೆ. ರಾಜ್ಯದ 2.14 ಕೋಟಿ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲಿದೆ. ಪ್ರತಿ ಕುಟುಂಬಕ್ಕೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಈಗಾಗಲೇ 52 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.
ವಿದ್ಯುತ್ ಬಳಕೆಯ ವಾರ್ಷಿಕ ಸರಾಸರಿಗೆ ಶೇ.10ರಷ್ಟು ಸೇರಿಸಿ ಮುಂದಿನ ಆಗಸ್ಟ್ ತಿಂಗಳಿಂದ ಶೂನ್ಯ ಬಿಲ್ ನೀಡಲಾಗುವುದು ಎಂದು ಹೇಳಿದ್ದಾರೆ.