ಬೆಂಗಳೂರು: ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಶಕ್ತಿ ಯೋಜನೆ ಯೋಜನೆ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.
ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಶಕ್ತಿ ಯೋಜನೆ ನನ್ನ ಹೆಂಡತಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಶೇ. ೫೦% ಮಹಿಳೆಯರು ಸಮಾಜದಲ್ಲಿ ಇದ್ದಾರೆ.
ಸ್ಟೂಡೆಂಟ್ ಸೇರಿ ಎಲ್ಲರಿಗೂ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಈ ತಿಂಗಳ ೧೧ ರಂದು ಈ ಯೋಜನೆ ಲಾಂಚ್ ಆಗುತ್ತದೆ. ಶಕ್ತಿ ಯೋಜನೆ ನನ್ನ ಹೆಂಡತಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ.
ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆ ಎಸ್ ಆರ್ಟಿಸಿ ಬಸ್ನಲ್ಲಿ ಅವಕಾಶ ಇದೆ.
ಎಸಿ ಬಸ್ ಬಿಟ್ಟು ಎಲ್ಲದರಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ ಇರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.