ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್ಗಳಲ್ಲಿ ಸ್ತ್ರೀಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.