ಬೆಂಗಳೂರು:– ಮಳೆಯಿಂದ ರೋಸಿ ಹೋಗಿದ್ದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ವರುಣನ ಅಬ್ಬರ ಕೊಂಚ ಕಡಿಮೆ ಆಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ. ಕೆಐಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.