ಗದಗ:- ಗದಗ ಪೊಲೀಸರು ಕಾರ್ಯಚರಣೆ ಮಾಡಿ ಅಂತರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾಲಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ.
ಈ ಸಂಬಂಧ ದೂರು ದಾಖಲಿಸಿ ತನಿಖೆಗಿಳಿದ ಪೊಲೀಸರು, ಅಪ್ರಾಪ್ತ ಬಾಲಕನನ್ನು ಅರೆಸ್ಟ್ ಮಾಡಿದ್ದಾರೆ.
ಅಲ್ಲದೇ ಆತನಿಂದ ಅಂದಾಜು 4 ಲಕ್ಷ 40 ಸಾವಿರ ಮೌಲ್ಯದ 12 ಬೈಕ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೂ ಘಟನೆ ಸಂಬಂಧ ಭರ್ಜರಿ ಕಾರ್ಯಾಚರಣೆ ಮಾಡಿದ್ದ ಗದಗ ಬಡಾವಣೆ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಅಭಿನಂದನೆ ಸಲ್ಲಿಸಿದ್ದಾರೆ