ಗದಗ:- ಗ್ಯಾರಂಟಿ ಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ವಿರುದ್ಧ ಪ್ರೊಟೆಸ್ಟ್ ನಡೆಸಲಾಗಿದೆ.
ರಾಜ್ಯ ಸರ್ಕಾರ ವಜಾ ಮಾಡುವಂತೆ ಜೆಡಿಎಸ್ ನಿಂದ ಪ್ರತಿಭಟನೆ ನಡೆದಿದೆ.
ಹುಯಿಳಗೊಳ ನಾರಾಯಣರಾಯರ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೆ ಕಾಲ್ನಡಿಗೆ ಮೂಲಕ ತೆರಳಿ ಪ್ರತಿಭಟನೆ ಮಾಡಿದ್ದಾರೆ. ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುಧ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಎಲ್ಲಾ ರಂಗಗಳಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ಭ್ರಷ್ಟಾಚಾರ ತಾಂಡವ ಆಡುತ್ತಿದೆ.ಯಾವುದೂ ಹೊಸ ಯೋಜನೆಗಳಿಲ್ಲ, ರೈತರಿಗೆ ಸಹಾಯಧನ ಕೊಟ್ಟಿಲ್ಲ, ಗೃಹಲಕ್ಷ್ಮಿ ಕೊಟ್ಟಿಲ್ಲ, ಸ್ಕಾಲರ್ಶಿಪ್ ನೀಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ಕಿಡಿಕಾರಿದರು.
ಗದಗ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದಾರೆ.