ದೊಡ್ಡಬಳ್ಳಾಪುರ:- ಟೀ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟವಾದ ಪರಿಣಾಮ ಟೀ ಅಂಗಡಿ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿಕ್ರಾಸ್ ಬಳಿಯ ರಾಜಶ್ರೀ ಕಂಫರ್ಟ್ ಪಕ್ಕದಲ್ಲಿ ಜರುಗಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಮಾಹಿತಿ ಆಧರಿಸಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
