ಗಂಭೀರ್ ಭಾರತ ತಂಡದ ಕೋಚ್ ಆಗಿ ಆಯ್ಕೆಯಾಗಿರುವುದು ಖಚಿತವಾಗಿದೆ.ಗೌತಮ್ ಗಂಭೀರ್ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲೂ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಎಂಬುದು ವಿಶೇಷ. ಅಂದರೆ ಭಾರತ ತಂಡಕ್ಕೆ ಮುಖ್ಯ ಕೋಚ್ ಆಗಿ ಆಯ್ಕೆಯಾದ ಬೆನ್ನಲ್ಲೇ ಗಂಭೀರ್ ಕೆಕೆಆರ್ ತಂಡಕ್ಕೆ ವಿದಾಯ ಹೇಳಲಿರುವ ವಿಡಿಯೋ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದಾರೆ ತಿಳಿದು ಬಂದಿದೆ
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.
ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಎಂದು ಘೋಷಿಸಿದ ಬಳಿಕ ಕೆಕೆಆರ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಈ ವಿಡಿಯೋ ಬಿಡುಗಡೆಯಾಗಲಿದೆ. ಈ ವಿಡಿಯೋ ಚಿತ್ರೀಕರಣದೊಂದಿಗೆ ಗಂಭೀರ್ ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಆಯ್ಕೆಯಾಗಿರುವುದು ಖಚಿತವಾಗಿದೆ.
ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು
2021 ರಲ್ಲಿ ಭಾರತ ಮಹಿಳಾ ತಂಡದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಲಿರುವುದು ಬಹುತೇಕ ಖಚಿತವಾಗಿದೆ.