ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ಗೀತಾ ಶಿವರಾಜ್ಕುಮಾರ್ ಶಿವಮೊಗ್ಗದಲ್ಲಿ ಚುನಾವಣಾ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಪಡೆದಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 9 ರಾಜ್ಯಗಳ 39 ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್ಕುಮಾರ್ ಹೆಸರು ಸೇರಿಕೊಂಡಿದೆ.
ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಗೀತಾ ಶಿವರಾಜ್ಕುಮಾರ್ ಚುನಾವಣಾ ಕಾರ್ಯಗಳಿಗಾಗಿ ಶಿವಮೊಗ್ಗದಲ್ಲಿ ಬಾಡಿಗೆಮನೆ ಪಡೆದಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಗಳಿಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್ಕುಮಾರ್ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಶಿವಮೊಗ್ಗದ ಕಲ್ಲಹಳ್ಳಿ ಬಡಾವಣೆಯಲ್ಲಿ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೇ ಮನೆಯೊಂದನ್ನ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಇಲ್ಲಿಯೇ ಚುನಾವಣಾ ಪ್ರಚಾರ ಕಾರ್ಯಗಳ ಕುರಿತು ಮಹತ್ವದ ಸಿದ್ಧತೆಗಳನ್ನು ಇಲ್ಲಿಯೇ ಮಾಡಿಕೊಳ್ಳಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.