ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾವು ರಂಗೇರಿದೆ. ಇಂದು ಶಿವಮೊಗ್ಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ, ದೊಡ್ಮನೆ ಕುಟುಂಬದ ಸೊಸೆ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ.
ಇಂದು ಡಿಸಿ ಕಚೇರಿಯಲ್ಲಿ ಗೀತಾ ಶಿವರಾಜ್ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಗೀತಾಗೆ ಪತಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಕೂಡ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.
ಗೀತಾ ಶಿವರಾಜ್ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಈಶ್ವರಪ್ಪ ನಿಂತಿದ್ದಾರೆ. ಘಟಾನುಘಟಿಗಳ ಸ್ಪರ್ಧಿಯಿಂದಾಗಿ ಶಿವಮೊಗ್ಗ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಗೀತಾ ಪರ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಗೀತಾ ಶಿವರಾಜ್ಕುಮಾರ್ ಸೋತಿದ್ದರು. ಈ ಬಾರಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.