ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 31 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಘಟಪ್ರಭಾ ನದಿಯಿಂದ 2.5 ಸಾವಿರ ಕ್ಯೂಸೆಕ್ ಹೊರ ಹರಿವು ಇದ್ದು
ಘಟಪ್ರಭಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ಮುಧೋಳ ತಾಲೂಕಿನ 18 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಳೆದ ಒಂದೇ ರಾತ್ರಿಯಲ್ಲಿ ಮುಧೋಳ ತಾಲೂಕಿನ ಮಿರ್ಜಿ-ಅಕ್ಕಿಮರಡಿ, ಒಂಟಗೊಡಿ-ಸೊರಗಾಂವ, ಚನಾಳ, ಢವಳೇಶ್ವರ ಸೇತುವೆ ಮುಳುಗಡೆಯಾಗಿವೆ. ಕ್ಷಣ ಕ್ಷಣಕ್ಕೂ ಘಟಪ್ರಭಾ ನದಿ ಹರಿವು ಹೆಚ್ಚುತ್ತಲೇ ಇದೆ.