ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.ಈ ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು. ಈಗ ಸೆಷನ್ಸ್ ಕೋರ್ಟ್ ಸಹ ನಟಿಗೆ ಜಾಮೀನು ನಿರಾಕರಿಸಿದೆ.
ರನ್ಯಾ ರಾವ್ ಈಗ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
