ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ವಿಧಿಸಿದ್ದ ನಿರ್ಬಂಧದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.
ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮತ್ತು ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದೆ
ಆಹಾರ ಪೂರೈಸಲು ರೆಸ್ಟೋರೆಂಟ್ಗಳಿಗೆ ನಿರ್ಬಂಧವಿಲ್ಲ. ಮದ್ಯಪಾನ ನಿರ್ಬಂಧಿಸದಿದ್ದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆಂದು ಭಾವಿಸಬೇಕಿಲ್ಲ. ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಆದೇಶ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರಕ್ಕೂ ಅನ್ವಯವಾಗುತ್ತದೆ.