ಬೆಂಗಳೂರು: ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗಳಿಗೆ ಈಗಿರುವ 5,000 ರೂ.ಗೆ ಬದಲಾಗಿ 7,000 ರೂ. ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಅಹವಾಲು ಆಲಿಸಿದರು. ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?
ಆರೋಗ್ಯ ಸಚಿವರ ಭರವಸೆಗಳು ಬೇಡಿಕೆಗಳನ್ನು ಪೂರ್ತಿಯಾಗಿ ಈಡೇರಿಸುವಂತಿಲ್ಲದ ಕಾರಣ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್, ಇಎಸ್ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ನೀಡಬೇಕು. ನಗರಗಳಲ್ಲಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸುವುದು ಇತ್ಯಾದಿಗಳು ಅವರ ಇತರ ಬೇಡಿಕೆಗಳಾಗಿವೆ.