ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕ್ಯಾನ್ಸರ್ ರೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲೂ ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಕೇಂದ್ರಗಳು ಇಲ್ಲ. ಇದರಿಂದ ಕ್ಯಾನ್ಸರ್ ಪೀಡಿತರಿಗೆ ಕಿಮೋಥೆರಪಿ ಮಾಡುವುದು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸರ್ಕಾರ ಸಜ್ಜಾಗುತ್ತಿದೆ. ಇದಕ್ಕಾಗಿ 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಾಮೋಗ್ರಫಿ ಯಂತ್ರಗಳನ್ನು ಖರೀದಿಸಲು ನಿರ್ಧರಿಸಿದೆ