ಬೆಂಗಳೂರು;- ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಗ್ರಾಮ್ಗೆ 30 ರೂನಷ್ಟು ಇಳಿಕೆ; ಬೆಳ್ಳಿಯೂ ಅಗ್ಗವಾಗಿದೆ. ಭಾರತದಲ್ಲಿ ಎಲ್ಲೆಡೆ ಚಿನ್ನದ ಬೆಲೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದೆ, ಇನ್ನೂ ಕೆಲವೆಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಕಡಿಮೆ ಆಗಿದೆ. ಕಳೆದ ಮೂರು ವಾರಗಳಿಂದ ಸತತವಾಗಿ ಏರಿಕೆ ಆಗಿದ್ದ ಈ ಎರಡೂ ಲೋಹಗಳ ಬೆಲೆ ಈ ವಾರ ಇಳಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 2ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,530 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,530 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ