ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು.
ಆದ್ರೆ, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿದೆ