ನವದೆಹಲಿ: ಮೆಟ್ರೋದಲ್ಲಿ ಓರ್ವ ಪ್ರಯಾಣಿಕ ಎರಡು ಸೀಲ್ಡ್ ಮದ್ಯದ (Metro Liquor) ಬಾಟಲ್ಗಳೊಂದಿಗೆ ಪ್ರಯಾಣಿಸಬಹುದು ಎಂದು ದೆಹಲಿ ಮೆಟ್ರೋ ಹೇಳಿದೆ.
ಟ್ವಿಟರ್ ಬಳಕೆದಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ದೆಹಲಿ ಮೆಟ್ರೋ ರೈಲು ನಿಗಮ, 2 ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಅನುಮತಿಸಲಾಗಿದೆ ಎಂದು ಹೇಳಿದೆ.
ಈವರೆಗೂ ಏರ್ಪೋರ್ಟ್ ಎಕ್ಸ್ಪ್ರೆಸ್ ಲೈನ್ ಹೊರತುಪಡಿಸಿ ದೆಹಲಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಬಳಿಕ CISF ಮತ್ತು DMRC ಅಧಿಕಾರಿಗಳನ್ನೊಳಗೊಂಡ ಸಮಿತಿಯು ಈ ಬಗ್ಗೆ ಚರ್ಚಿಸಿ ಪ್ರತಿ ವ್ಯಕ್ತಿಗೆ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅವಕಾಶ ನೀಡಿದೆ.
ಮೆಟ್ರೋ ಆವರಣದಲ್ಲಿ ಮದ್ಯಪಾನ ನಿಷೇಧ ಮುಂದುವರಿಸಲಾಗಿದೆ ಎಂದು ತಿಳಿಸಿದ್ದು, ಮೆಟ್ರೋ ಪ್ರಯಾಣಿಕರು ಪ್ರಯಾಣಿಸುವಾಗ ಬಾಟಲ್ಗಳನ್ನು ವ್ಯವಸ್ಥಿತವಾಗಿ ಕೊಂಡೊಯ್ಯಲು ವಿನಂತಿಸಲಾಗಿದೆ.