ನವದೆಹಲಿ: ಬೆನ್ನು ನೋವಿನಿಂದಾಗಿ ಕಳೆದ ಸೆಪ್ಟೆಂಬರ್ನಿಂದಲೂ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ ಉಳಿದಿರುವ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಗೆ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಭಾರತ ತಂಡ ಆಗಸ್ಟ್ನಲ್ಲಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, 3 ಟಿ20 ಪಂದ್ಯಗಳ್ನಾಡಲಿದೆ.
ಈ ಸರಣಿಗೂ ಮುನ್ನ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದ್ದು, ಆಡುವ ಸಾಧ್ಯತೆಯಿದೆ ಎಂದು ಬಿಸಿಸಿಐ (BCCI) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ. ಬುಮ್ರಾ ಸದ್ಯ ಬೆಂಗಳೂರಿನ ಎನ್ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಬಿಸಿಸಿಐ ಕೂಡ ಎದುರು ನೋಡುತ್ತಿದೆ. ಇದೇ ಕಾರಣದಿಂದಾಗಿ ಬಿಸಿಸಿಐ ಏಷ್ಯಾಕಪ್ಗೂ ಮುನ್ನ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬುಮ್ರಾರನ್ನು ಕಣಕ್ಕಿಳಿಸುವ ಇರಾದೆಯಲ್ಲಿದೆ. ಹಾಗಾಗಿ ಐರ್ಲೆಂಡ್ ಸರಣಿಯ ಮೂಲಕ ಜಸ್ಪ್ರೀತ್ ಬುಮ್ರಾ ಅವರ ಕಂಬ್ಯಾಕ್ ಅನ್ನು ಎದುರು ನೋಡಬಹುದು.