ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ ನೀಡಿದ್ದು ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ ಒಂದೇ ವಿಷಯದ ಎರಡೆರಡು ಪಠ್ಯ ಪುಸ್ತಕ ಹಾಗೆ ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ಇಳಿಕೆಗೆ ಮಹತ್ವದ ಕ್ರಮ ತೆಗೆದುಕೊಳ್ಳಲಾಗಿದೆ.
2 ಭಾಗಗಳಾಗಿ ಪಠ್ಯ ಮುದ್ರಿಸಲು ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದ್ದು ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ಶಿಕ್ಷಣ ಇಲಾಖೆ. ಎರಡು ಭಾಗ ಮಾಡಿ ಪಠ್ಯಪುಸ್ತಕ ಮುದ್ರಿಸುವುದರಿಂದ ಶೇಕಡ 50ರಷ್ಟು ತೂಕ ಕಡಿಮೆಯಾಗಲಿದೆ ಎನ್ನುತ್ತಿರುವ ಶಿಕ್ಷಣ ಇಲಾಖೆ.
2024-25ನೇ ಸಾಲಿನಿಂದಲೇ ಅಳವಡಿಸಲಾಗುತ್ತಿದ್ದು 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬ್ಯಾಗ್ ಹೊರೆಯನ್ನ, ಕಡಿಮೆ ಮಾಡಲು ಶಾಲಾ ಶಿಕ್ಷಣ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.