ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸದಸ್ಯರನ್ನು ನೋಂದಾಯಿಸಲು ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಕರ್ನಾಟಕ ಸರ್ಕಾರವು ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿದ್ದು 2023-24 ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ನೀಡಿದ್ದು, ಸದಸ್ಯರ ನೋಂದಾವಣೆಗೆ ಫೆಬ್ರವರಿ28 ಕೊನೆಯ ದಿನಾಂಕವಾಗಿದ್ದು, ಯೋಜನೆಯನ್ನು ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅಡಿಯಲ್ಲಿ ಸುಮಾರು 30ಲಕ್ಷಕ್ಕೂ ಅಧಿಕ ಸದಸ್ಯರ ನೋಂದಾವಣೆ ಗುರಿ ಹೊಂದಿದ್ದು, ಆದರೆ ಸದಸ್ಯರ ನೋಂದಾವಣೆ ನಿರೀಕ್ಷಿಸಿದ ಮಟ್ಟದಲ್ಲಿ ಸಾಧ್ಯವಾಗಿಲ್ಲ ಹಾಗೂ ಈ ಅವಧಿಯಲ್ಲಿ ಎಲ್ಲಾ ಸಂಘದ ಸದಸ್ಯರುಗಳ ನೋಂದಾವಣೆ ಸಾದ್ಯವಾಗುವುದಿಲ್ಲವೆಂದು ಹಾಗೂ ಅನೇಕ ಸಹಕಾರೀ ಸಂಘಗಳು, ಸದಸ್ಯರು ಗಳು, ಶಾಸಕರು, ವಿಧಾನ ಸಭೆ ಹಾಗೂ ಪರಿಷತ್ ನ ಸದಸ್ಯರುಗಳೂ ಕೂಡ ಯೋಜನೆಯ ನೋದಾವಣೆಯ ಅವಧಿಯನ್ನು ವಿಸ್ತರಿಸುವಂತೆ ಈಗಾಗಲೇ ಮನವಿ ಸಲ್ಲಿಸಿರುತ್ತಾರೆ.
ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ?
ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .