ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ (Yeshwantpur) ಹೌರಾದೆಡೆಗೆ (Howrah) ಸಾಗುತ್ತಿದ್ದ ಮತ್ತೊಂದು ರೈಲು (Train) ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೇ ವಕ್ತಾರ ಅಮಿತಾಬ್ ಶರ್ಮಾ, ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ.
ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 50 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾದ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ
ಸಹಾಯವಾಣಿ ಸಂಖ್ಯೆಗಳು:
ಹೌರಾ: 033-26382217
ಖರಗ್ಪುರ: 8972073925 & 9332392339
ಬಾಲಸೋರ್: 8249591559 & 7978418322
ಶಾಲಿಮಾರ್: 9903370746