ಬೆಂಗಳೂರು: 2047 ಕ್ಕೆ ಹೆದ್ದಾರಿಗಳು ಮತ್ತು ಎಕ್ಸ್ಪ್ರೆಸ್ವೇಗಳ ಅಭಿವೃದ್ಧಿಗಾಗಿ ಸರ್ಕಾರವು ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಇದು ಟ್ರಕ್ಗಳು ಒಂದು ದಿನದಲ್ಲಿ 800 ಕಿ.ಮೀ ಕ್ರಮಿಸಲು ಸಾಧ್ಯವಾಗಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ಅಧ್ಯಯನದ ಪ್ರಕಾರ, ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ಮ ತ್ತು ತಜ್ಞರೊಂದಿಗೆ ಸಮಾಲೋಚಿಸಿ ದೇಶದಲ್ಲಿ ಲಾಜಿಸ್ಟಿಕ್ಸ್ ವೆಚ್ಚಗಳು ಒಟ್ಟು ಆರ್ಥಿಕ ಉತ್ಪಾದನೆಯ ಶೇ.7.8% ರಿಂದ 8.9 ರ ನಡುವೆ ಇರುತ್ತದೆ. ಲಾಜಿಸ್ಟಿಕ್ಸ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು, 2030 ರ ವೇಳೆಗೆ ಭಾರತದಲ್ಲಿ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ವಿಶ್ವ ಬ್ಯಾಂಕ್ನ ಲಾಜಿಸ್ಟಿಕ್ಸ್ ಕಾರ್ಯಕ್ಷಮತೆ ಸೂಚ್ಯಂಕ ಶ್ರೇಯಾಂಕವನ್ನು ಸುಧಾರಿಸುವ ಉದ್ದೇಶದಿಂದ ಸರ್ಕಾರವು ಕಳೆದ ಸೆಪ್ಟೆಂಬರ್ನಲ್ಲಿ ಲಾಜಿಸ್ಟಿಕ್ಸ್ ನೀತಿಯನ್ನು ಹೊರತಂದಿತ್ತು.
2047 ರ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್ಪ್ರೆಸ್ವೇಗಳ ಜಾಲದ ಅಭಿವೃದ್ಧಿಗಾಗಿ ಮಾಸ್ಟರ್ಪ್ಲಾನ್ ದೇಶದ ರಾಷ್ಟ್ರೀಯ ಹೆದ್ದಾರಿಗಳ ಒಟ್ಟಾರೆ ಚೌಕಟ್ಟನ್ನು ಬಹುಮುಖವಾಗಿ ಹೆಚ್ಚಿಸುತ್ತದೆ ಎಂದು ಅಧಿಕಾರಿ ಹೇಳಿದರು