ಬೆಂಗಳೂರು ;– ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಕಳೆದ ಎರಡು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಗಾರು ಮಳೆ ವೈಫಲ್ಯವಾಗಿರುವುದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೀವ್ರ ತೊಂದರೆಯಾಗಿದೆ.
ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಆತ್ಮಹತ್ಯೆಗೊಳಗಾದ ರೈತರಲ್ಲಿ 18 ಜನ ಹಾವೇರಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಮುಂಗಾರು ವೈಫಲ್ಯದಿಂದ ಎರಡೆರಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಬೆಳೆಯದೆ ಸಾಲ ತೀರಿಸಲು ಸಾಧ್ಯವಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೊಂದ ಅನೇಕ ಸಣ್ಣ, ಅತಿ ಸಣ್ಣ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ನೆರವಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.