ಬೆಂಗಳೂರು: ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಇಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.
ಅಧಿವೇಶನದಲ್ಲಿ ಎಷ್ಟು ವಿಧೇಯಕ ಮಂಡನೆ ಆಗಲಿದೆ ಎಂದು ಗೊತ್ತಾಗಲಿದೆ. ಸೌಹಾರ್ದಯುತವಾಗಿ ಅಧಿವೇಶನ ನಡೆಸಬೇಕೆಂದು ಸ್ಪೀಕರ್ ಮನವಿ ಮಾಡಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು(Legislature Session) ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್ ಮಂಡಿಸಲಿದ್ದಾರೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ(Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.