ಬೆಂಗಳೂರು: ವಿಧಾನಸೌಧ ಕೆಂಗಲ್ ಗೇಟ್ ಬಳಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲರ ಭಾಷಣ ನಾನು ಕಂಡಂತೆ ಸಪ್ಪೆ ಭಾಷಣ. ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿರುವ ಸರ್ಕಾರ. ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ ಎಂದರು.
ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ಎಂಬ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಧ್ವನಿಗೂಡಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ಕೇಳಿದ್ದಾರೆ,ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ ಎಂದರು.