ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ತಲಾ10 ಕೋಟಿ ರೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ವಿಧಾನ ಪರಿಷತ್ ಸದಸ್ಯ TA ಶರವಣ ಅಭನಂದಿಸಿದ್ದಾರೆ.
2023 – 24ನೇ ಸಾಲಿನ ಆಯವ್ಯಯ ಅಧಿವೇಶನದಲ್ಲಿ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಸಮುದಾಯದವರಿಗೆ ಅನ್ಯಾಯವಾಗಿರುವ ಬಗ್ಗೆ ಸದನದಲ್ಲಿ ವಿಧಾನ ಪರಿಷತ್ ಸದಸ್ಯ TA ಶರವಣ ಪ್ರಸ್ತಾಪಿಸಿದ್ದರು. ಇದನ್ನು ಪರಿಶಿಲಿಸಿದ ಸಿ.ಎಂ ಬೊಮ್ಮಾಯಿ ಅವರು ಅನುದಾನದ ಮರು ಹೊಂದಾಣಿಕೆ ಮಾಡುವ ಮೂಲಕ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ತಲಾ.10 ಕೋಟಿ ರೂ ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ನೀಡುವುದಾಗಿ ಬರವಸೆ ನೀಡುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ TA ಶರವಣ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ಅಭಿನಂದಿಸಿದ್ದಾರೆ.
ಹಾಗೂ ಸರ್ಕಾರವು ಸಮಾನ್ಯ ವರ್ಗದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಿರುವ ಕುರಿತು ಪರಿಷತ್ ಸದಸ್ಯ TA ಶರವಣ ಸದನದಲ್ಲಿ ಪ್ರಸ್ತಾಪಿಸಿದ್ದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಆದೇಶವನ್ನು ಪರಿಶೀಲಿಸಿ ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮುದಾಯದವರಿಗೂ ಸಹ ವಿದ್ಯಾರ್ಥಿ ವೇತನವನ್ನು ನೀಡುವುದಾಗಿ ಬರವಸೆ ನೀಡಿದ್ದಾರೆ.
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮರು ಜಾರಿಗೊಳಿಸಲು ಪರಿಷತ್ ಸದಸ್ಯ TA ಶರವಣ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಸ್ಥಾಪಿತ ಅಧ್ಯಕ್ಷರಾಗಿರುವ TA ಶರವಣ, ನಾನು ಕರ್ತವ್ಯ ನಿರ್ವಹಿಸಿರುವುದು ಸಂತೋಷ ಮತ್ತು ತೃಪ್ತಿದಾಯಕವಾಗಿರುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಈ ನಿಗಮವು ಯಶಸ್ವಿಯಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.