ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವ್ಯಂದದಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ವೃಂದದಲ್ಲಿ ಖಾಲಿ ಇರುವ ಕರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಅರ್ಹ ಮತ್ತು ಆಸಕ್ತರು ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಸಲ್ಲಿಸಿ.
ಹುದ್ದೆ ವಿವರ: ಒಟ್ಟು 30 ಟೈಪಿಸ್ಟ್ ಕಂ ಕ್ಲರ್ಕ್ ಹುದ್ದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಯು ಪಿಯುಸಿ ಉತ್ತೀರ್ಣಗೊಂಡು, ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣಗೊಂಡಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ನವೆಂಬರ್ 29 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ lokayukta.karnataka.gov.in ಭೇಟಿ ನೀಡಿ.