ರಾಜ್ಯ ಸರ್ಕಾರದಿಂದ (Government) ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. SC, ST ವಿದ್ಯಾರ್ಥಿಗಳಿಗೆ ಸೋನಾ ಮಸೂರಿ ಅಕ್ಕಿ ವಿತರಿಸಲು ಸಚಿವರು ಆದೇಶ ಹೊರಡಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಮಟ್ಟದ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳು ಸೋನಾ ಮಸೂರಿ ಊಟ ಮಾಡಲಿ ಎಂಬ ಉದ್ದೇಶದಿಂದ 2,50 ಲಕ್ಷ ಮಕ್ಕಳ ಊಟಕ್ಕೆ ಅಕ್ಕಿ ನೀಡಲು ನಿರ್ಧರಿಸಲಾಗಿದೆ.
ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಸಿ., ಎಸ್.ಟಿ. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ವಿಕಾಸಸೌಧದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 2023 -24 ನೇ ಸಾಲಿನ ಎಸ್.ಸಿ.ಎಸ್.ಪಿ & ಟಿ.ಎಸ್.ಪಿ ಆಯವ್ಯಯ ಹಂಚಿಕೆಯ ಬಗ್ಗೆ ನೋಡಲ್ ಏಜೆನ್ಸಿ ಸಭೆಯಲ್ಲಿ ಉಭಯ ಸಚಿವರು ವಿಶೇಷವಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ವ್ಯವಸ್ಥೆಯ ಚರ್ಚೆ ಮಾಡಿದರು.
ಹಾಸ್ಟೆಲ್ ಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು 2,50,000 ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಸೋನಾಮಸೂರಿ ಅಕ್ಕಿ ನೀಡಲು ತಿಳಿಸಿದ್ದಾರೆ. ರಾಜ್ಯದಲ್ಲಿ ಆಯಾ ವಲಯವಾರು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಊಟದ ವ್ಯವಸ್ಥೆ ಮಾಡಲಾಗಿದ್ದು, ಆದರೆ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ
ವಿದ್ಯಾರ್ಥಿನಿಲಯಗಳಲ್ಲಿ ಅಕ್ಕಿಯಿಂದ ಮಾಡುವ ಆಹಾರ ಪದಾರ್ಥಗಳಿಗೆ ಪ್ರಾಮುಖ್ಯತೆ ನೀಡಿದ್ದು, ಹಾಗಾಗಿ ಈ ಹಿಂದೆ ಬಳಕೆ ಮಾಡುತಿದ್ದ ಅಕ್ಕಿಗಿಂತ ಇನ್ನು ಮುಂದೆ ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಉತ್ತಮ ಗುಣಮಟ್ಟದ ಸೋನಾ ಮಸೂರಿ ಅಕ್ಕಿ ನೀಡಲು ಸಭೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉಭಯ ಸಚಿವರು ಸಲಹೆ ನೀಡಿ ಮುಂದಿನ ತಿಂಗಳಿಂದಲೇ ಜಾರಿಗೆ ತರುವ ವ್ಯವಸ್ಥೆ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.