ಬೆಂಗಳೂರು : ಪಂಚಮಸಾಲಿಗೆ 2 ಎ ಮೀಸಲಾತಿ ನೀಡುವ ಸಂಬಂಧ ಮಾ.24 ರಂದು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಿದ್ಯಾ ಎಂಬ ಪ್ರಶ್ನೆ ಮೂಡಿದೆ.
ಹೌದು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಸಂಬಂಧ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.
ಮಾ.24 ರಂದು ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಸಿಗುವ ಭರವಸೆ ಇಟ್ಟುಕೊಂಡಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ನಿರ್ದೇಶನ ಮಾಡಿದರೂ ಸಿಎಂ ಬೊಮ್ಮಾಯಿ ಮೀಸಲಾತಿ ಈಡೇರಿಸಲಿಲ್ಲ, ನಾವು ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕ ಮಾಡುತ್ತಲೇ ಇದ್ದೆವು, ಇಂದು ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಬಂದಿದೆ. ಗುಡ್ ನ್ಯೂಸ್ ಸಿಗುವ ಭರವಸೆ ಸಿಕ್ಕಿದೆ ಎಂದರು.
ಚುನಾವಣೆ ಹೊತ್ತಲ್ಲೇ ಪಂಚಮಸಾಲಿಗೆ 2 ಎ ಮೀಸಲಾತಿ ನೀಡುವ ಸಂಬಂಧ ಮಾ.24 ರಂದು ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್ ನೀಡಲಿದ್ಯಾ ಎಂಬ ಪ್ರಶ್ನೆ ಮೂಡಿದೆ.