ಬೆಂಗಳೂರು ;– ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕವೂ ಅರ್ಜಿ ನೋಂದಣಿ ಮಾಡಬಹುದಾಗಿದೆ.
ವೆಬ್ ಸೈಟ್ ವಿಳಾಸ ;
http://sevasindhugs.karnataka.gov.in ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಕರೆ ಮಾಡಬಹುದು.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡಕಚೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಆಧಾರ್ ಕಾರ್ಡ್, ಆರ್ ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.