ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಭರವಸೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳೆಯರಿಗೆ ಇನ್ನೂ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ನಿಯಮವನ್ನು ತಂದಿದೆ.
ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆ ಯಾರ್ಯಾರಿಗೆ ಬೇಗ ಸಿಗುತ್ತಿಲ್ಲ ಅಂತವರಿಗೆ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲು ಹಾಗೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಏರ್ಪಾಟ್ ಮಾಡಲಾಗಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಶಿಬಿರ ಸ್ಥಾಪಿಸಲಾಗಿದ್ದು ಇದೇ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.