ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಶನಿವಾರದ ಅಂತ್ಯಕ್ಕೆ 1 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು.
ಒಟ್ಟು1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಶನಿವಾರ ಸಂಖ್ಯೆ 6 ಗಂಟೆ ವೇಳೆಗೆ 1,00,09,863 ಮನೆ ಯಜಮಾನಿಯರು ನೋಂದಣಿ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಸ
ಕೇವಲ 15 ದಿನಗಳಲ್ಲಿ ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸಂಸತ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 16 ಅಥವಾ 20ಕ್ಕೆ ಬೆಳಗಾವಿಯಲ್ಲಿ ಸಮಾವೇಶ
ಆಗಸ್ಟ್ 16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2,000 ರೂಪಾಯಿ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.