ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮತ್ತೊಂದು ಮಹತ್ವದ ಯೋಜನೆ ಜಾರಿಗಾಗಿ ಮುಹೂರ್ತ ಫಿಕ್ಸ್ ಆಗಿದೆ. ಇಷ್ಟುದಿನ ರಾಜ್ಯದ ಮಹಿಳೆಯರು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ.
ಜೂನ್ 27ರಿಂದ ಅಂದ್ರೆ ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಂದುಕೊಂಡಂತೆ ಆದ್ರೆ ಸ್ವಾತಂತ್ರೋತ್ಸವ ದಿನಕ್ಕೆ ಲಕ್ಷ್ಮೀಯರ ಖಾತೆಗೆ ಲಕ್ಷ್ಮೀಯ ಆಗಮನವಾಗಲಿದೆ.
ಮಹಿಳಾ ಮಣಿಗಳಿಗೆ ಶಕ್ತಿಯ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ದೊಡ್ಡ ಗಿಫ್ಟ್ ಕೊಡೋಕೆ ಮುಂದಾಗಿದೆ. ಎಲ್ಲೆಂದರಲ್ಲಿ ಫ್ರೀ ಬರ್ಡ್ನಂತೆ ಓಡಾಡಿ ಅಂತ ನಾರಿಯರಿಗೆ ಫ್ರೀ ಬಸ್ ಪ್ರಯಾಣ ಕಲ್ಪಿಸಿದ್ದ ಸರ್ಕಾರ ಈಗ ಖರ್ಚಿಗೆ ರಾಜ್ಯದ ಎಲ್ಲಾ ಗೃಹಗಳ ಲಕ್ಷ್ಮೀಯರ ಖಾತೆಗೆ ಹಣ ಹಾಕಲು ಮುಂದಾಗಿದೆ.
ಇಂದಿನಿಂದ ಗೃಹಲಕ್ಷ್ಮೀ ಯೋಜನೆ ನೋಂದಾಣಿ ಪ್ರಕ್ರಿಯೆ ಆರಂಭವಾಗಲಿದ್ದು, ಆಗಸ್ಟ್ 16 ಅಥವಾ 17ರ ನಂತರ ಮನೆ ಯಜಮಾನಿ ಖಾತೆಗೆ ಹಣ ತಲುಪಿಸಲು ಸರ್ಕಾರ ನಿರ್ಧಾರ ಮಾಡಿದೆ.
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಯಪ್ ರೆಡಿ ಮಾಡಲಾಗಿದೆ..ಆಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ನಡೆಸಲಾಗಿದೆ.ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರಲ್ಲ, ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ.ಅರ್ಜಿ ಸಲ್ಲಿಕೆಗೆ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಆಧಾರ್ ಕಾರ್ಡ್ ಜೊತೆ ವೋಟರ್ ಐಡಿ ಇರಬೇಕು. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಇಲ್ಲ ಎಂದರೆ ಗ್ರಾಮ ಒನ್ & ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದೆ. ಗೃಹಲಕ್ಷ್ಮಿ ಯೋಜನೆಯಡಿ 2,000 ರೂಪಾಯಿ ಪಡೆಯಲು ಎಪಿಎಲ್ ಅಥವಾ ಬಿಪಿಎಲ್ ಇಲ್ಲ ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ದಾಖಲೆ ಕಡ್ಡಾಯ.ಯೋಜನೆ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.