ಬೆಂಗಳೂರು :– ನಗರದ ಮಾಲ್ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್ ಅಪಮಾನ ಮಾಡಿದ್ದು ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಮಾಲ್ಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದೆ
ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.
ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ