ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆಯೇ ಇತ್ತೀಚೆಗಷ್ಟೇ ಹಾಲು, ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶಗಳು ಕೂಡ ವ್ಯಕ್ತವಾಗಿದ್ದವು. ಇದೀಗ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ನಿಗಮ ಮುಂದಾಗಿದೆ.
.ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ. ಈಗ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ಉಳಿಗಾಲವಿಲ್ಲ. ಹೀಗಾಗಿ, ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಇನ್ನು ಕೆಎಸ್ಆರ್ಟಿಸಿ ನೌಕರರಿಗೆ ಸಂಬಳ ಹೆಚ್ಚಳ ಮತ್ತು ಇತರೆ ಸವಲತ್ತುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. 2020ರಲ್ಲಿಯೇ ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ಬಸ್ ಟಿಕೆಟ್ ದರ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗಬಾರದೆಂಬ ದೃಷ್ಟಿಯಿಂದ ಇಲ್ಲಿಯವರೆಗೂ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ. ಹಾಗಾಗಿ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎಂಬಂತಿದೆ ಸಚಿವರ ನಡೆ..
ಇನ್ನು ಯೋಜನಡಯಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈ ಹಣವನ್ನು ಬರಿಸಲು ಇದೀಗ ಸರ್ಕಾರ ಕೆಎಸ್ಆರ್ಟಿಸಿ ಟಿಕೆಟ್ ದರವನ್ನು ಏರಿಕೆ ಮಾಡುತ್ತಿದೆ ಎನ್ನುವ ಆಕ್ರೋಶಗಳು ಭಗಿಲೆದ್ದಿವೆ. ಒಟ್ಟಾರೆಯಾಗಿದೆ ಬಸ್ ಟಿಕೆಟ್ ದರ ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗು ಅಂತೂ ಪಕ್ಕ.. . ಕೆಎಸ್ಆರ್ಟಿಸಿ ಸಂಸ್ಥೆ ಉಳಿಯ ಬೇಕಾದರೆ ದರ ಹೆಚ್ಚಳ ಅನಿವಾರ್ಯವಾಗಿದೆ.