ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಸಮಯ ಕಳೆದಂತೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಅಧ್ಯಯನಗಳಷ್ಟೇ ಕಾರಣವಲ್ಲ.
ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು