ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ 2024 ರಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಅಸಾಮಾನ್ಯ ಬದಲಾವಣೆ ಉಂಟಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಜನರ ರಾಜ್ಯದಲ್ಲಿ ಹೆಚ್ಚಾಗಳಿದೆ.
ಇದರಿಂದ ಕರ್ನಾಟಕ ರಾಜ್ಯಕ್ಕೆ ಇನ್ನಷ್ಟು ಬಲ ಸಿಗುವಂತಾಗಲಿ ಎಂದು ಹಾರೈಸಿರುವ ಡಿಕೆಶಿ, ಹೊಸ ವರ್ಷದ ಈ ಶುಭ ಘಳಿಗೆಯನ್ನು ಹೊಸ ಉತ್ಸಾಹದೊಂದಿಗೆ ಆರಂಭಿಸಿ. ನಿಮ್ಮ ಕನಸುಗಳನ್ನು ಈಡೇರಿಸುವತ್ತ ನಿಮ್ಮ ಪಯಣ ಯಶಸ್ವಿಯಾಗಿ ಸಾಗಲಿ.
ರಾಜ್ಯದಲ್ಲಿ ಈ ವರ್ಷವೂ ಮಳೆ, ಬೆಳೆ ಉತ್ತಮವಾಗಲಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಸಾಧಿಸಲಿ. ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳಿಂದ 2024 ರಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಅಸಾಮಾನ್ಯ ಬದಲಾವಣೆ ಉಂಟಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.