ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರಿಂದ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯದ ಜನತೆಗೆ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿದ್ದೀರಿ. ಕೂಡಲೆ ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ಮಾಡಲಿ ಎಂದು ಬಿಜೆಪಿ ಮುಖಂಡ ಕಿರಣಕುಮಾರ ದೇಸಾಯಿ ಒತ್ತಾಯಿಸಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ ಅದು ಬರಿ ಘೋಷಣೆಯಾಗಿ ಉಳಿಯಬಾರದು ಕರ್ನಾಟಕದ ಜನರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಲಿ ಎಂದರು.
ಪ್ರಕಾಶ ಕುಂಬಾರ