ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರ ಡೀಲ್ ಗಳು ಬಯಲಿಗೆ ಬರೋ ಮುನ್ಸೂಚನೆ ಸಿಕ್ಕಿದೆ.ಹಿಂದಿನ ಸರ್ಕಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋಟಿ ಕೋಟಿ ಅಕ್ರವನ್ನ ಎಳೆಎಳೆಯಾಗಿ ಬಿಚ್ಚಿಡಲು ಹೆಲ್ತ್ ಮಿನಿಸ್ಟರ್ ಪಣ ತೊಟ್ಟಿದ್ದಾರೆ.ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಹೆಲ್ತ್ ಮಿನಿಸ್ಟರ್ ಬ್ಯಾಕ್ ಟು ಬ್ಯಾಕ್ ಸಭೆ ಮಾಡ್ತಿದ್ದಾರೆ.
ಸರ್ಕಾರಿ ಕೆಲಸಕ್ಕೆ ಸೇರಿಕೊಂಡ್ರೆ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಸಿಕ್ಕದಂಗೆ.ಯಾಕೆಂದರೆ ಈಸೀಯಾಗಿ ದುಡ್ ಹೊಡೆಯೋ ಐಡಿಯಾ ಕೆಲ ಜನಪ್ರತಿನಿಧಿಗಳಿಗೆ ಮಾಡ್ತಾರೆ. ಹಿಂದನ ಬಿಜೆಪಿ ಸರ್ಕಾದ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿರೋ ಡೀಲ್ ಗಳ ಮರುತನಿಖೆಗೆ ಸರ್ಕಾರ ಮುಂದಾಗಿದೆ. ಹೌದು.ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರೋ ಕಾಂಗ್ರೆಸ್ ಸರ್ಕಾರ,ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಿಧ ಹಗರಣಗಳ ಆರೋಪಗಳ ಬಗ್ಗೆ ಹೊಸದಾಗಿ ತನಿಖೆ ಪ್ರಾರಂಭಿಸಲು ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದು,ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಮರು ತನಿಖೆ ನಡೆಸಲು ನಿರ್ಧರಿಸಲಾಗಿದೆ ಈ ಹಿಂದೆ ಇದ್ದ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಆಕ್ಸಿಜನ್ ದುರಂತದ ಬಗ್ಗೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೊಸ ಸರ್ಕಾರ ಬಂದಿದ್ದರಿಂದ ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಇದಕ್ಕಾಗಿ ಡಿಪಿಆರ್ ಕೂಡ ರೆಡಿಯಾಗುತ್ತಿದೆ ಎಂದಿದ್ದಾರೆ.
ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿ ವೆಂಟಿಲೇಟರ್, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ. ಹಾಗೂ ಆಗಸ್ಟ್ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.
ಇನ್ನೂ ಕೋವಿಡ್ ಅವಧಿಯಲ್ಲಿ ಕರೆಯಲಾದ ಟೆಂಡರ್ ಗಳನ್ನ ಮರುಪರಿಶೀಲನೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.ರಾಜ್ಯದಲ್ಲಿ ಆ್ಯಂಬುಲೆನ್ಸ್ ಗಳನ್ನ ನಿರ್ವಹಣೆ ಮಾಡ್ತಿರೋ 108 ಆಂಬುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಗಳನ್ನ ಮರು ಟೆಂಡರ್ ಮಾಡಲಾಗ್ತದೆ ಅಂತ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಒಟ್ಟಿನಲ್ಲಿ ಹಿಂದಿನ ಸರ್ಕಾರದಲ್ಲಿ ಕೋವಿಡ್ ವೇಳೆ ಕೋಟಿ ಕೋಟಿ ಕೊಳ್ಳೆ ಹೊಡೆದು ಮಜಾ ಮಾಡಿದ್ದಾರೆ.ಇದೀಗ ಅವರ ಕಳ್ಳಾಟ ಬಟಾಬಯಲಾಗುವ ಸಾಧ್ಯತೆ ಇದೆ.ಇದನ್ನು ಎಷ್ಟರ ಮಟ್ಟಿಗೆ ಪಾರದರ್ಶಕ ವಾಗಿ ಮತ್ತೆ ತನಿಖೆ ಮಾಡ್ತಾರೆ ಅನ್ನೋದನ್ನ ಕಾದುನೋಡಬೇಕಿದೆ.