ದರ್ಶನ್ ಗ್ಯಾಂಗ್ ನಿಂದ ಬರ್ಬರ ಹತ್ಯೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ಇದೀಗ ಸಂತಸದ ವಾತಾವರಣ ಮನೆ ಮಾಡಿದೆ.
ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ.
‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.