” ಅಪ್ಪ ” ಈ ಶಬ್ದದಲ್ಲೇ ಅದೆಂಥಾ ಗತ್ತು, ಗಾಂಭೀರ್ಯ… ತಾನು ಎಲ್ಲಾ ಕಡೆ ಇರೊಕೆ ಸಾಧ್ಯವಿಲ್ಲ ಅಂತಾ ಗೊತ್ತಾಗಿ ತಾಯೀನ ಸೃಷ್ಟಿ ಮಾಡಿದ ದೇವ್ರು, ಏಕಕಾಲದಲ್ಲಿ ತನ್ನಿಂದ ಎಲ್ಲರನ್ನು ಸಲಹಲು ಸಾದ್ಯವಿಲ್ಲ ಎಂದು ತಿಳಿದು ಅಪ್ಪನನ್ನು ಸೃಷ್ಟಿಸಿದ.ಅಪ್ಪ ಅನ್ನೋ ಪದಕ್ಕೆ ಸಾವಿರ ಆನೆಗಳ ಬಲ,ದರ್ಪ.ಕೋಪ ಅತಿ ಎನ್ನಿಸುವ ಶಿಸ್ತು,ಅನುಮಾನ.. ಇವೆಲ್ಲದರ ಸಮ್ಮಿಲನವೇ ಅಪ್ಪ.