ನಟಿ ಹರಿಪ್ರಿಯಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಯಾಗಿರುವ ಹರಿಪ್ರಿಯಾಗೆ ಅದ್ದೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿದೆ. ಈ ವೇಳೆ ಹಲವು ನಟಿಯರು ಭಾಗಿಯಾಗಿ ಹರಿಪ್ರಿಯಾಗೆ ಶುಭ ಹಾರೈಸಿದ್ದಾರೆ.
ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿ ಮೊದಲ ಮಗುಗಿನ ಆಗಮನಕ್ಕೆ ಕಾಯ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದ ಹರಿಪ್ರಿಯಾ ಇದೀಗ ಅದ್ದೂರಿಯಾಗಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ನಟಿ ತಾರಾ ಕೂಡ ಭಾಗವಹಿಸಿ ಹರಿಪ್ರಿಯಾ ಶುಭಕೋರಿದ್ದಾರೆ. ನಟಿಗೆ ಕುಂಕುಮ ಇಟ್ಟು ಗಿಫ್ಟ್ ನೀಡಿ ವಿಶ್ ಮಾಡಿದ್ದಾರೆ.
ಕಳೆದ ವರ್ಷ ಜ.26ರಂದು ಮೈಸೂರಿನಲ್ಲಿ ವಸಿಷ್ಠ ಸಿಂಹ ಜೊತೆ ನಟಿ ಹಸೆಮಣೆ ಏರಿದರು. ಹಲವು ವರ್ಷಗಳು ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಪಡೆದು ಮದುವೆಯಾದರು. ಇದೀಗ ಚೊಚ್ಚಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಮದುವೆಯ ಬಳಿಕ ಸಿನಿಮಾ ರಂಗದಿಂದ ದೂರ ಉಳಿದ ಹರಿಪ್ರಿಯಾ ಇದೀಗ ಮೊದಲ ಮಗುವನ್ನು ಭರಮಾಡಿಕೊಳ್ಳುವ ಸಂತಸದಲ್ಲಿದ್ದಾರೆ.